ಸಾಂಗ್ಲಿ, 22 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಸಮೀಪ ನೆಲಮಂಗಲ ಭೀಕರ ಅಪಘಾತದಲ್ಲಿ ಸಾವೀಗೀಡಾಗಿದ್ದ 6 ಜನರ ಮೃತದೇಹಗಳು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಸ್ವಗ್ರಾಮಕ್ಕೆ ತಲುಪಿದ್ದು, ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ.
ಬೆಳಿಗ್ಗೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಮೊರಬಗಿ ಗ್ರಾಮಕ್ಕೆ ಮೂರು ಅಂಬುಲೆನ್ಸ್ ಮೂಲಕ ಆರು ಮೃತದಹೇಗಳನ್ನು ತರಲಾಗಿದೆ. ಮೃತದೇಹಗಳನ್ನು ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಅಪಘಾತದಲ್ಲಿ
ಮೃತಪಟ್ಟ ಚಂದ್ರಮ್ ಅವರ ಜಮೀನಿನಲ್ಲಿ ಲಿಂಗಾಯತ ಸಮಾಜದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರು. ಬಳಿಕ ಮೃತದೇಹಗಳಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಬೆಂಕಿ ಸ್ಪರ್ಶಿಸುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್