ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್; ಸಾಯಿರಾಜ್‌ಗೆ ಒಂದು ಚಿನ್ನ, ಎರಡು ಬೆಳ್ಳಿ ಪದಕ
ಏಷ್ಯನ್ ಯೂತ್ ಮತ್ತು ಜ್ಯೂನಿಯರ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್; ಭಾರತದ ಸಾಯಿರಾಜ್‌ಗೆ ಒಂದು ಚಿನ್ನ, ಎರಡು ಬೆಳ್ಳಿ ಪದಕ
ಬೆಂಗಳೂರು, 24 ಡಿಸೆಂಬರ್ (ಹಿ.ಸ.) :ಆ್ಯಂಕರ್ :


ದೋಹಾ, 24 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕತಾರ್‌ನ ದೋಹಾದಲ್ಲಿ ನಡೆದ ಏಷ್ಯನ್ ಯೂತ್ ಮತ್ತು ಜೂನಿಯರ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ, ಸಾಯಿರಾಜ್ ಪರದೇಶಿ ಸ್ನ್ಯಾಚ್, ಕ್ಲೀನ್ ಮತ್ತು ಜರ್ಕ್ ಮತ್ತು ಲಿಫ್ಟ್ ವಿಭಾಗಗಳಲ್ಲಿ ಒಂದು ಚಿನ್ನ ಮತ್ತು ಎರಡು ಬೆಳ್ಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಾಯಿರಾಜ್ ಒಟ್ಟಾರೆ ೩೧೦ ಕೆಜಿ ಎತ್ತುವ ಮೂಲಕ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಯುವ ದಾಖಲೆ ನಿರ್ಮಿಸಿದರು.

ಈ ಕೂಟದಲ್ಲಿ ಪುರುಷರ ವಿಭಾಗದಲ್ಲಿ ಭಾರತಕ್ಕೆ ಇದು ಮೊದಲ ಚಿನ್ನವಾಗಿದೆ.

ಸ್ನ್ಯಾಚ್ ವಿಭಾಗದಲ್ಲಿ ಸಾಯಿರಾಜ್ ೧೩೯ ಕೆಜಿ ಭಾರ ಎತ್ತುವ ಮೂಲಕ ಯುವ ರಾಷ್ಟ್ರೀಯ ದಾಖಲೆ ನಿರ್ಮಿಸುವುದರೊಂದಿಗೆ ಬೆಳ್ಳಿ ಪದಕ ಪಡೆದರು.

ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ ೧೭೧ ಕೆಜಿ ಭಾರ ಎತ್ತುವ ಮೂಲಕ ಅವರು ಎರಡನೇ ಬೆಳ್ಳಿ ಪದಕವನ್ನೂ ತಮ್ಮದಾಗಿಸಿಕೊಂಡರು. ಇದು ಮತ್ತೊಂದು ಯುವ ದಾಖಲೆಯಾಗಿತ್ತು.

ಮಹಿಳೆಯರ ೭೬ ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಸಂಜನಾ ನಡೆದ ಚಾಂಪಿಯನ್‌ಶಿಪ್‌ನಲ್ಲಿ ಯೂತ್‌ನಲ್ಲಿ ಮೂರು ಮತ್ತು ಜೂನಿಯರ್ ವಿಭಾಗದಲ್ಲಿ ಎರಡು ಸೇರಿ ಐದು ಬೆಳ್ಳಿ ಪದಕಗಳನ್ನು ಗೆದ್ದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande