ಮೆಲ್ಬೋರ್ನ್, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಬಾರ್ಡರ್ ಗವಾಸ್ಕರ್ ಕ್ರಿಕೆಟ್ ಟ್ರೋಫಿಗಾಗಿ ಭಾರತ - ಆಸ್ಟ್ರೇಲಿಯಾ ನಡುವೆ ಇಂದು ಮೆಲ್ಬೋರ್ನ್ ನಲ್ಲಿ ೪ ನೇ ಟೆಸ್ಟ್ ಕ್ರಿಕೆಟ್ ಆರಂಭವಾಗಿದೆ.
ಮೆಲ್ಬೋರ್ನ್ನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
೫ ಪಂದ್ಯಗಳ ಸರಣಿಯ ಪೈಕಿ ಉಭಯ ತಂಡಗಳು ಒಂದು ಪಂದ್ಯವನ್ನು ಗೆದ್ದು ಸಮಬಲ ಸಾಧಿಸಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್, ತನುಷ್ ಕೋಟ್ಯಾನ್,ನಿತೀಶ್ ಕುಮಾರ್ ರೆಡ್ಡಿ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಮಾರ್ನಸ್ ಲಾನುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಸ್ಯಾಮ್ ಕೊನ್ಸ್ಟಾಸ್, ಜ್ಯೆ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ , ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಬ್ಯೂ ವೆಬ್‌ಸ್ಟರ್.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್