ನಾಳೆ  ಚಕೋರ ಸಾಹಿತ್ಯ  ಕಾರ್ಯಕ್ರಮ
ಕೊಪ್ಪಳ, 26 ಡಿಸೆಂಬರ್ (ಹಿ.ಸ.) ಆ್ಯಂಕರ್: ಕರ್ನಾಟಕ ಸಾಹಿತ್ಯ ಅಕಾಡಮಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭವನ್ನು ಡಿ. 27ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಕೊಪ್ಪಳ ವಿವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ವಿಶ್ವವ
ನಾಳೆ  ಚಕೋರ ಸಾಹಿತ್ಯ  ಕಾರ್ಯಕ್ರಮ


ಕೊಪ್ಪಳ, 26 ಡಿಸೆಂಬರ್ (ಹಿ.ಸ.)

ಆ್ಯಂಕರ್: ಕರ್ನಾಟಕ ಸಾಹಿತ್ಯ ಅಕಾಡಮಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭವನ್ನು ಡಿ. 27ರ ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಕೊಪ್ಪಳ ವಿವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ ಬಿ.ಕೆ. ರವಿ ಕಾರ್ಯಕ್ರಮ ಉದ್ಘಾಟಿಸುವರು. ಕುವೆಂಪು ಸಾಹಿತ್ಯದಲ್ಲಿ ಸಮಾಜಮುಖಿ ಚಿಂತನೆ ಕುರಿತು ಕವಯಿತ್ರಿ ಸಾವಿತ್ರಿ ಮುಜುಮದಾರ ಮಾತನಾಡಲಿದ್ದಾರೆ.

ಹಿರಿಯ ಹೋರಾಟಗಾರರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಅಲ್ಲಮ ಪ್ರಭು ಬೆಟದೂರು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಹಳ್ಳಿಯವರು ಗೌರವ ಉಪಸ್ಥಿತಿ ವಹಿಸುವರು. ಕುಲ ಸಚಿವ ಡಾ.ರಾಜೆಂದ್ರಪ್ರಸಾದ, ಹಣಕಾಸು ಅಧಿಕಾರಿ ಅಮೀನಸಾಬ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಧ್ಯಕ್ಷತೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಅಜಮೀರ ನಂದಾಪುರ ವಹಿಸಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳು, ಕವಿಗಳು, ಆಸಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದೆ.

****

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande