ಬೆಳಗಾವಿ , 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ :ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ೧೦೦ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಶತಮಾನೋತ್ಸವ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ವಿಸ್ತರಿತ ಸಭೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿ ತಿಲಕವಾಡಿಯ ವೀರಸೌಧಕ್ಕೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿರಿಯ ಮುಖಂಡ ಜೈರಾಮ್ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿ , ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಶಾಲು ಹೊದೆಸಿ ಬರಮಾಡಿಕೊಂಡರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್