ಕೊಪ್ಪಳ, 26 ಡಿಸೆಂಬರ್ (ಹಿ.ಸ.)
ಆ್ಯಂಕರ್: ಡಿಸೆಂಬರ್ 27ರ ಶುಕ್ರವಾರರಂದು 110 ಕೆ.ವಿ ಎಂ.ಯು.ಎಸ್.ಎಸ್ ಗಿಣಿಗೇರಾ ಸ್ಟೇಷನ್ನ ತೃತಿಯ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ನಡೆಸುತ್ತಿರುವ ಪ್ರಯುಕ್ತ, ಹಲವು ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
110 ಕೆ.ವಿ ಎಂ.ಯು.ಎಸ್.ಎಸ್ ಗಿಣಿಗೇರಾ ಸ್ಟೇಷನ್ಗೆ ಒಳಪಡುವ ಎಫ್-8 ಮುಂಡರಗಿ ಎನ್.ಜೆ.ವೈ, ಎಫ್-9 ಲೇಬಗೇರಿ ಎನ್.ಜೆ.ವೈ, ಫೀಡರ್ನ ಎಲ್ಲಾ ಲೈನ್ಗಳಲ್ಲಿ ಡಿ.27ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.
ವಿದ್ಯುತ್ ನಿರ್ವಹಣೆ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಸೂಚಿಸಲಾಗಿದೆ.
ಒಂದು ವೇಳೆ ವಿದ್ಯುತ್ ಅಫಘಾತ ಸಂಬವಿಸಿದ್ದಲ್ಲಿ ಕಂಪನಿಯು ಜವಬ್ದಾರರಾಗಿರುವುದಿಲ್ಲ ಎಂದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್