ಬಳ್ಳಾರಿ :  ಡಿ.29 ರಂದು ಜಾಗೃತ್ 5ಕೆ ರನ್
ಬಳ್ಳಾರಿ, 26 ಡಿಸೆಂಬರ್ (ಹಿ.ಸ.) ಆ್ಯಂಕರ್: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಅಪರಾಧ ತಡೆ ಮಾಸಾಚರಣೆ-2024ರ ಪ್ರಯುಕ್ತ ಜಿಲ್ಲಾ ಪೊಲೀಸ್ ವತಿಯಿಂದ ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ರಸ್ತೆ ಸುರಕ್ಷತೆ, ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಹಾಗೂ ಡ್ರಗ್ಸ್‌ಮುಕ್ತ ಕರ್ನಾಟಕದ ನಿರ್ಮಾಣಕ್ಕಾ
ಬಳ್ಳಾರಿ :  ಡಿ.29 ರಂದು ಜಾಗೃತ್ 5ಕೆ ರನ್


ಬಳ್ಳಾರಿ, 26 ಡಿಸೆಂಬರ್ (ಹಿ.ಸ.)

ಆ್ಯಂಕರ್: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿರ್ದೇಶನದಂತೆ ಅಪರಾಧ ತಡೆ ಮಾಸಾಚರಣೆ-2024ರ ಪ್ರಯುಕ್ತ ಜಿಲ್ಲಾ ಪೊಲೀಸ್ ವತಿಯಿಂದ ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ರಸ್ತೆ ಸುರಕ್ಷತೆ, ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಹಾಗೂ ಡ್ರಗ್ಸ್‌ಮುಕ್ತ ಕರ್ನಾಟಕದ ನಿರ್ಮಾಣಕ್ಕಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಂಗವಾಗಿ ಡಿ.29 ರಂದು ಬೆಳಿಗ್ಗೆ 06.30 ಗಂಟೆಗೆ ಜಾಗೃತ್ 5ಕೆ ರನ್ ಆಯೋಜಿಸಲಾಗಿದೆ.

ಜಾಗೃತ್ 5ಕೆ ರನ್ ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಿಂದ ಆರಂಭಗೊಂಡು ಗಡಿಗಿ ಚನ್ನಪ್ಪ ವೃತ್ತ, ಹಳೇ ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ ಸರ್ಕಲ್, ಹೆಚ್.ಆರ್.ಗವಿಯಪ್ಪ (ಮೋತಿ ಸರ್ಕಲ್), ವಾಲ್ಮೀಕಿ ಸರ್ಕಲ್, ಕನಕದುರ್ಗಮ್ಮ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣ ಮುಖಾಂತರ ಮರಳಿ ಮುನಿಸಿಪಲ್ ಮೈದಾನದ ಆವರಣದವರೆಗೆ ನಡೆಯಲಿದೆ.

ಸಾರ್ವಜನಿಕರು ಭಾಗವಹಿಸಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande