'ಅಸ್ಮಿತೆ' ವ್ಯಾಪಾರ ಮೇಳ-2024 ಚಾಲನೆ
ಬೆಳಗಾವಿ , 26 ಡಿಸೆಂಬರ್ (ಹಿ.ಸ.) : ಆ್ಯಂಕರ್ :ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು
'ಅಸ್ಮಿತೆ' ವ್ಯಾಪಾರ ಮೇಳ-2024


ಎಲ್ಲಾ ಜಿಲ್ಲೆಗಳಿಂದ  ಸ್ವ-ಸಹಾಯ ಗುಂಪಿನ ಮಹಿಳೆಯರು ಭಾಗಿ: ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದು, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ.  ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮೇಳಗಳು ಒಳಗೊಂಡಿದೆ. ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ದಿನಾಂಕ:26-12-2024 ರಿಂದ 04.01.2025ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.


ಬೆಳಗಾವಿ , 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ :ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ವಿದ್ಯುಕ್ತ್ ಚಾಲನೆ ನೀಡಿದರು.

ಬೆಳಗ್ಗೆ ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ

ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.

ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಚಿವರಾದ ಎಚ್.ಕೆ.ಪಾಟೀಲ್ , ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ,

ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳಕರ, ಎಂ.ಬಿ.ಪಾಟೀಲ, ಡಾ. ಎಂ.ಸಿ.ಸುಧಾಕರ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕರಾದ ಆರ್ ವಿ ದೇಶಪಾಂಡೆ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಲವಾರು ಗಣ್ಯರೊಂದಿಗೆ ಮುಖ್ಯಮಂತ್ರಿಗಳು ಬೆಳಗಾವಿ ನಗರದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ 'ಅಸ್ಮಿತೆ' ವ್ಯಾಪಾರ ಮೇಳ-2024ವನ್ನು ಉದ್ಘಾಟಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಈ ಸರಸ್ ಮೇಳ ಮತ್ತು ಖಾದಿ ಉತ್ಸವವು ಆರಂಭವಾಗಿದ್ದು, ಡಿ.26ರಿಂದ ಜನವರಿ 04ರವರೆಗೆ ನಡೆಯಲಿದೆ.

ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ಭಾಗಿ:

ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದು, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮೇಳಗಳು ಒಳಗೊಂಡಿದೆ. ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ದಿನಾಂಕ:26-12-2024 ರಿಂದ 04.01.2025ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande