ವಾಸುದೇವನ್ ನಾಯರ್  ನಿಧನಕ್ಕೆ ಪ್ರಧಾನಿ   ಮೋದಿ ಸಂತಾಪ
 
PM Narendra Modi expresses sadness over the passing of eminent


ನವದೆಹಲಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಲಯಾಳಂ ಚಿತ್ರರಂಗದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಟಿ.ವಾಸುದೇವನ್‌ ನಾಯರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್' ನಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿರುವ ಪ್ರಧಾನಿ ಮೋದಿ, ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಎಂಟಿ ವಾಸುದೇವನ್ ನಾಯರ್ ಜಿ ಅವರ ನಿಧನದಿಂದ ದುಃಖವಾಗಿದೆ. ಅವರ ಕೃತಿಗಳು, ಮಾನವ ಭಾವನೆಗಳ ಆಳವಾದ ಪರಿಶೋಧನೆಯೊಂದಿಗೆ, ತಲೆಮಾರುಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರನ್ನು ಪ್ರೇರೇಪಿಸುತ್ತವೆ. ಅವರು ಧ್ವನಿ ಇಲ್ಲದವರಿಗೆ ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತೆ ಧ್ವನಿ ನೀಡುತ್ತಿದ್ದರು. ಅವರ ಕುಟುಂಬಸ್ಥರಿಗೆ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande