ಬೆಂಗಳೂರು, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಕೆಎಂಎಫ್‌ಗೆ ಹೆಚ್ಚಿನ ಹಾಲು ಹರಿದು ಬಂದಿದ್ದ ಹಿನ್ನೆಲೆಯಲ್ಲಿ ಪ್ಯಾಕೆಟ್‌ನಲ್ಲಿ ನೀಡಲಾಗುತ್ತಿದ್ದ ಹಾಲಿನ ಪ್ರಮಾಣವನ್ನು ೫೦ ಎಂಎಲ್ ಹೆಚ್ಚಿಸಿ ದರವನ್ನೂ ೨ ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಹಾಲಿನ ಜೊತೆ ದರವನ್ನೂ ಹಿಂಪಡೆಯುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ೫೦ ಎಂ.ಎಲ್. ಹೆಚ್ಚುವರಿ ಹಾಲು ವಾಪಸ್ಸಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಇಂದಿನಿಂದ ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬೇಡಿಕೆಗೆ ಅನುಗುಣವಾಗಿ ಇತರೆಡೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಹಿಟ್ಟಿಗೆ ಹೆಚ್ಚುವರಿಯಾಗಿ ಪ್ರೋಟಿನ್ ಸೇರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್