ಮನಮೋಹನ್​ ಸಿಂಗ್ ನಿಧನಕ್ಕೆ ರಾಜ್ಯದಲ್ಲಿ 7 ದಿನ ಶೋಕಾಚರಣೆ
ಬೆಂಗಳೂರು, 27 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. 92ನೇ ವಯಸ್ಸಿನಲ್ಲಿ ಮನಮೋಹನ್‌ ಸಿಂಗ್‌ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು ಸರ್ಕಾರಿ ರಜೆ ಘೋಷಣೆ ಮಾ
ಮನಮೋಹನ್​ ಸಿಂಗ್ ನಿಧನಕ್ಕೆ ರಾಜ್ಯದಲ್ಲಿ 7 ದಿನ ಶೋಕಾಚರಣೆ


ಬೆಂಗಳೂರು, 27 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೊನೆಯುಸಿರೆಳೆದಿದ್ದಾರೆ. 92ನೇ ವಯಸ್ಸಿನಲ್ಲಿ ಮನಮೋಹನ್‌ ಸಿಂಗ್‌ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಇಂದು ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಇಂದು ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ.

ಬೆಳಗಾವಿಯಲ್ಲಿದ್ದ ಕಾಂಗ್ರೆಸ್​ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಬೆಳಗಾವಿಯಿಂದ ನವದೆಹಲಿಗೆ ತೆರಳಿದ್ದಾರೆ.

---------------

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande