ನವದೆಹಲಿ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಹಣಕಾಸು ವಲಯದಲ್ಲಿ ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತ ಮತ್ತು ನೈತಿಕ ಚೌಕಟ್ಟಿನಲ್ಲಿ ಅಭಿವೃದ್ಧಿ ಪಡಿಸಲು ಭಾರತೀಯ ರಿಸರ್ವ್ ಬ್ಯಾಂಕ್ ೮ ಸದಸ್ಯರ ಸಮಿತಿಯನ್ನು ರಚಿಸಿದೆ.
ಈ ಕುರಿತು ಆರ್‌ಬಿಐ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಸಮಿತಿಗೆ ಐಐಟಿ ಬಾಂಬೆಯ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಪುಷ್ಪಕ್ ಭಟ್ಟಾಚಾರ್ಯ ಅವರು ನೇತೃತ್ವವಹಿಸಲಿದ್ದಾರೆ.
ಈ ಸಮಿತಿಯು ಜಾಗತಿಕವಾಗಿ ಮತ್ತು ಭಾರತದಲ್ಲಿ ಹಣಕಾಸು ಸೇವೆಗಳಲ್ಲಿ ಕೃತಕ ಬುದ್ಧಿಮತ್ತೆಯ ಅಳವಡಿಕೆಯನ್ನು ಪರಿಶೀಲಿಸುತ್ತದೆ. ಅಲ್ಲದೇ ಇದರ ಅಳವಡಿಕೆಯ ಸವಾಲುಗಳು, ಮೌಲ್ಯಮಾಪನ ಮತ್ತು ಮೇಲ್ವಿಚಾರಣೆಯ ಕುರಿತಾಗಿ ಸಮಿತಿಯ ಶಿಫಾರಸು ಮಾಡಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್