ವಾಷಿಂಗ್ಟನ್ ಡಿಸಿ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಆರು ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಅವರನ್ನು ಭೇಟಿಯಾದರು.
ಈ ವೇಳೆ, ಉಭಯ ನಾಯಕರು ಭಾರತ-ಅಮೆರಿಕಾ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯ ಪರಿಶೀಲನೆ ಸೇರಿದಂತೆ ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಕುರಿತು ವಿಚಾರ ವಿನಿಮಯ ಮಾಡಿಕೊಂಡರು.
ಡಾ.ಜೈಶಂಕರ್ ಅವರ ಸಹವರ್ತಿ ಅವರನ್ನು ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಲು ಭೇಟಿಯಾಗಲಿದ್ದಾರೆ.
ತಮ್ಮ ಭೇಟಿಯ ವೇಳೆ ಅವರು, ಭಾರತೀಯ ರಾಯಭಾರಿಗಳ ಸಮ್ಮೇಳನದ ಅಧ್ಯಕ್ಷತೆವಹಿಸಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್