ಬೆಳಗಾವಿ, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ :ಮನಮೋಹನ್ ಸಿಂಗ್ ಅವರು ಈ ದೇಶದ ಶ್ರೇಷ್ಠ ಪ್ರಧಾನ ಮಂತ್ರಿ. ದೇಶದ ಎಲ್ಲಾ ವರ್ಗದ ಜನರನ್ನು ಕಾಪಾಡಿದ ನಿಜವಾದ ಆರ್ಥಿಕ ತಜ್ಞ ಹಾಗೂ ಕ್ರಾಂತಿಕಾರಿ ಎಂದು ಡಿಸಿಎಂ ಡಿ. ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು.
ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಆರ್ಥಿಕ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪನೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವರಲ್ಲಿ ಮನವಿ ಮಾಡುತ್ತೇನೆ. ಮುಂದಿನ ಪೀಳಿಗೆಗೆ ಇವರ ಆರ್ಥಿಕ ಕ್ರಾಂತಿ ಸೇರಿದಂತೆ ದೇಶಕ್ಕೆ ನೀಡಿದ ಕೊಡುಗೆಗಳನ್ನು ತಲುಪಿಸುವುದೇ ನಿಜವಾದ ಶ್ರದ್ಧಾಂಜಲಿ. ವಿದ್ಯಾರ್ಥಿಗಳು ಇವರ ಆರ್ಥಿಕ ನೀತಿಗಳನ್ನು ಅಧ್ಯಯನ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರ ಜ್ಞಾನವನ್ನು ಪಸರಿಸುವ ಹಾಗೂ ಉಳಿಸುವ ಕೆಲಸವಾಗುತ್ತದೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್