ಮೈಸೂರು, 27 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ರಾಜ್ಯದ್ಯಂತ ಶೋಕಾಚರಣೆ ಇರುವ ಕಾರಣ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ನೂತನ ಹೊಸ ವರ್ಷಾಚರಣೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೋಕಾಚರಣೆ ಜಾರಿಯಲ್ಲಿರುವ ಕಾರಣ ಈ ನಿರ್ಧಾರ ಮಾಡಲಾಗಿದೆ. ಕಳೆದ ವಾರದಿಂದ ಮೈಸೂರು ಅರಮನೆಯಲ್ಲಿ ಮಾಗಿ ಉತ್ಸವದ ಅಂಗವಾಗಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಇದು ಎಂದಿನಂತೆ ರಾತ್ರಿ ೯ ಗಂಟೆಯ ತನಕ ನಡೆಯಲಿದೆ. ಆದರೆ ಇಂದು ಮತ್ತು ನಾಳೆ ಏರ್ಪಡಿಸಲಾಗಿದ್ದ ದೀಪಾಲಂಕಾರವನ್ನು ಮಾತ್ರ ರದ್ದುಪಡಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್