ಬೆಂಗಳೂರು, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುದಾನ ಬಳಕೆಗಾಗಿ ಇ-ಗ್ರಾಮ ಸ್ವರಾಜ್ ತಂತ್ರಾಂಶದಲ್ಲಿ ತಲೆದೋರಿದ್ದ ತಾಂತ್ರಿಕ ಸಮಸ್ಯೆ ನಿವಾರಣೆಯಾಗಿದ್ದು, ಇದೀಗ ಅನುದಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಸೂಚಿಸಿದೆ.
ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ೧೫ನೇ ಹಣಕಾಸು ಆಯೋಗದ ಮೊದಲ ಕಂತಿನ ಹಣ ಬಳಕೆಗೆ ತಾಂತ್ರಿಕ ತೊಡಕು ಎದುರಾಗಿದ್ದು, ಇದೀಗ ಸಮಸ್ಯೆ ಬಗೆಹರಿಸಲಾಗಿದೆ. ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳು ಆಯೋಗದ ನೆರವಿನ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್