ಮಂಗಳೂರು, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಪರ್ಲಡ್ಕ್ ದಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಾದವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಟ್ಟಿಪಳ್ಳ ನಿವಾಸಿಗಳು ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ತಂದೆ - ಮಗ ಹಾಗೂ ಇನ್ನೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇವರು ತಮ್ಮ ಆಲ್ಟೋ ಕಾರಿನಲ್ಲಿ ಗೋಂದೊಳ್ ಪೂಜೆಗೆ ಪುತ್ತೂರಿನ ಪುಣಚಕ್ಕೆ ಆಗಮಿಸಿದ್ದರು. ಹಿಂತಿರುಗುವ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ. ಅಣ್ಣು ನಾಯ್ಕ, ಅವರ ಪುತ್ರ ಚಿದಾನಂದ ಹಾಗೂ ನೆರೆಮನೆಯ ರಮೇಶ್ ನಾಯ್ಕ ಮೃತರಾದವರು ಎಂದು ಗುರುತಿಸಲಾಗಿದೆ ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯ ಬಳಿಕ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಉದಯ ರವಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್