ನಾಳೆ ಹಾವೇರಿಯಲ್ಲಿ ಕೆಪಿಎಸ್‌ಸಿ ಮರು ಪರೀಕ್ಷೆ
ಹಾವೇರಿ, 28 ಡಿಸೆಂಬರ್ (ಹಿ.ಸ.) : ಆ್ಯಂಕರ್ : ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ನಡೆಸುತ್ತಿರುವ ಪೂರ್ವಭಾವಿ ಮರು ಪರೀಕ್ಷೆ ನಾಳೆ ಹಾವೇರಿಯಲ್ಲಿ ನಡೆಯಲಿದ್ದು, ಪರೀಕ್ಷೆ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿ ಉತ್ತರಕನ್ನಡ ಜಿಲ್
ಪೂರ್ವಭಾವಿ ಮರು ಪರೀಕ್ಷೆ ನಿಷೇಧಾಜ್ಞೆ ಜಾರ


ಹಾವೇರಿ, 28 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ನಡೆಸುತ್ತಿರುವ ಪೂರ್ವಭಾವಿ ಮರು ಪರೀಕ್ಷೆ ನಾಳೆ ಹಾವೇರಿಯಲ್ಲಿ ನಡೆಯಲಿದ್ದು, ಪರೀಕ್ಷೆ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿ ಉತ್ತರಕನ್ನಡ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಪರೀಕ್ಷೆ ನಡೆಯುವ ಕೇಂದ್ರಗಳ ವ್ಯಾಪ್ತಿಯಲ್ಲಿ ಝರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಬೇಕು. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ವಿದ್ಯುನ್ಮಾನ ವಸ್ತುಗಳನ್ನು ತರಬಾರದು ಎಂದು ಸೂಚಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande