ಉಡುಪಿ ಶ್ರೀಕೃಷ್ಣ ಮಠಕ್ಕೆ ಉಪೇಂದ್ರ ಭೇಟಿ
ಉಡುಪಿ , 29 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ಯು ಐ ಚಲನಚಿತ್ರ ಪ್ರದರ್ಶನ ಯಶಸ್ವಿ ಹಿನ್ನಲೆಯಲ್ಲಿ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಭೇಟಿ ಕೊಟ್ಟ ಬೆನ್ನಲ್ಲೇ ಈಗ ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟ ಉಪೇಂದ್ರ ಅವರು ಭೇಟಿ ಕೊಟ್ಟ
ಶ್ರೀಕೃಷ್ಣ ಮಠಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಭೇಟಿ


ಉಡುಪಿ , 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶನ ಮಾಡಿರುವ ಯು ಐ ಚಲನಚಿತ್ರ ಪ್ರದರ್ಶನ ಯಶಸ್ವಿ ಹಿನ್ನಲೆಯಲ್ಲಿ ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಭೇಟಿ ಕೊಟ್ಟ ಬೆನ್ನಲ್ಲೇ ಈಗ ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟ ಉಪೇಂದ್ರ ಅವರು ಭೇಟಿ ಕೊಟ್ಟರು. ಯುಐ ಚಲನಚಿತ್ರದ ತಂಡ ಕೂಡ ಜೊತೆಗಿದ್ದರು.

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ಉಪೇಂದ್ರ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಠದ ಪುತ್ತಿಗೆ ಸುಗುಣೇಂದ್ರ ತೀರ್ಥರು ಯುಐ ತಂಡಕ್ಕೆ ಶುಭ ಹಾರೈಸಿದ್ದಾರೆ.

ಬಳಿಕ ಚಿತ್ರ ತಂಡವು ಪರ್ಯಾಯ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿತು.

ನಟ ಉಪೇಂದ್ರ ಮತ್ತು ಚಿತ್ರ ತಂಡದ ಕಲಾವಿದರು ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಗೀತೋತ್ಸವದಲ್ಲಿ ಭಾಗಿಯಾದರು

. ಈ ಸಂದರ್ಭದಲ್ಲಿ ನಟ ಉಪೇಂದ್ರ ಹಾಗೂ ಇತರ ಚಿತ್ರ ತಂಡದ ಕಲಾವಿದರ ಜೊತೆ ಸೆಲ್ಫಿಗೆ ಅಭಿಮಾನಿಗಳು ಮುಗಿಬಿದ್ದರು.

---------------

---------------

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ


 rajesh pande