ಧಾರವಾಡ, 29 ಡಿಸೆಂಬರ್ (ಹಿ.ಸ.):
ಆ್ಯಂಕರ್:
ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಕ್ಷೇತ್ರ ತನಿಖಾಧಿಕಾರಿ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2025 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗಾಗಿ 0836-2214234 www.uasd. edu ವನ್ನು ಸಂಪರ್ಕಿಸಬಹುದೆಂದು ಕೃವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa