ಮಡಿಕೇರಿ, 29 ಡಿಸೆಂಬರ್ (ಹಿ.ಸ.):
ಆ್ಯಂಕರ್:
ಮಡಿಕೇರಿ ಹೋಬಳಿಯ ಎಸ್. ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 05 ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ದಿನಾಂಕ 30.12.2024 ರಂದು ಸಮಯ ಬೆಳಿಗ್ಗೆ 06.00 ಗಂಟೆಯಿಂದ ದಿನಾಂಕ 02-01-2025 ರ ಬೆಳಿಗ್ಗೆ 06.00 ಗಂಟೆಯವರೆಗೆ 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ್ರ್ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಮಡಿಕೇರಿ ಉಪ ವಿಭಾಗಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ,ಆದೇಶಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa