ಎಂ.ಕೆ.ಸ್ಟಾಲಿನ್ ಗೆ ಪ್ರಧಾನಿ ಮೋದಿ ಕರೆ
ನವದೆಹಲಿ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ತಮಿಳುನಾಡಿನಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು. ಈ ವೇಳೆ ಅವರು, ತಮಿಳುನಾಡಿಗೆ ಸಾಧ್ಯವಾಗುವ ಎಲ್ಲ ಸಹಕಾರ ನೀಡುವ ಭರವಸೆ ನೀ
ಗೆ ಪ್ರಧಾನಿ ಮೋದಿ ಕರೆ


ನವದೆಹಲಿ, 03 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ತಮಿಳುನಾಡಿನಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.

ಈ ವೇಳೆ ಅವರು, ತಮಿಳುನಾಡಿಗೆ ಸಾಧ್ಯವಾಗುವ ಎಲ್ಲ ಸಹಕಾರ ನೀಡುವ ಭರವಸೆ ನೀಡಿದರು. ಫೆಂಗಲ್ ಚಂಡಮಾರುತದಿಂದ ರಾಜ್ಯ ಹಾನಿಗೊಳಗಾಗಿರುವ ಹಿನ್ನೆಲೆ ತಮಿಳುನಾಡಿಗೆ ೨ ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರಕ್ಕೆ ಪತ್ರದ ಮುಖೇನ ಮನವಿ ಮಾಡಿದರು.

ತಮ್ಮ ಪತ್ರದಲ್ಲಿ ಅವರು, ಮಳೆ ನಿಂತು ಭತ್ತದ ಗದ್ದೆಗಳಿಂದ ಮಳೆ ನೀರು ಹರಿದು ಹೋದ ಬಳಿಕ ಹಾನಿಯ ಅಂದಾಜು ಮಾಡಲಾಗುವುದು. ಚಂಡಮಾರುತದಿಂದ ಮೃತರಾದವರ ಮತ್ತು ಜಾನುವಾರುಗಳ ಕುಟುಂಬಗಳಿಗೆ ಹಾಗೂ ಹಾನಿಗೀಡಾದ ಮನೆಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದಿದ್ದರು ಹಾಗೂ ಚಂಡಮಾರುತದಿಂದ ಉಂಟಾದ ಹಾನಿ ಪರಿಶೀಲಿಸಲು ಪ್ರತ್ಯೇಕ ತಂಡವನ್ನು ನಿಯೋಜಿಸಲು ಇದೇ ವೇಳೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande