ಜಮ್ಮು, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ, ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಲ್ಲಿ ಭಾರಿ ಹಿಮಪಾತವಾಗುತ್ತಿದ್ದು, ಕೊರೆಯುವ ಚಳಿ ನಡುವೆ ಗಸ್ತು ತಿರುಗುತ್ತಿದ್ದಾರೆ. ಜಿಲ್ಲೆಯ ಪಿರ್ ಪಾಂಚಾಲ್ ಶಿಖರಗಳ ಮೇಲಿನ ಬಿಳಿ ಹಿಮದ ಹಾಳೆಗಳ ಮೇಲೆ ರಕ್ತ ಹೆಪ್ಪುಗಟ್ಟುವ ಚಳಿಯಲ್ಲಿ ಗಸ್ತು ತಿರುಗುತ್ತಿರುವುದು ಕಂಡು ಬಂದಿದೆ. ಉಗ್ರರು ಒಳ ನುಸುಳದಂತೆ ಭದ್ರತಾ ಸಿಬ್ಬಂದಿ ಸಂಪೂರ್ಣವಾಗಿ ಆಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಮಂಜುಗಡ್ಡೆಯ ಮೇಲೆ ಗಸ್ತು ತಿರುಗುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa