ನವದೆಹಲಿ, 30 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಚಿತಾಭಸ್ಮವನ್ನು ವಿಸರ್ಜನೆ ಮಾಡಲು ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಕುಟುಂಬದೊಂದಿಗೆ ಬಂದಿಲ್ಲ ಹಾಗೂ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಪಕ್ಷ ಸೋಮವಾರ ಸ್ಪಷ್ಟನೆ ನೀಡಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಚಿತಾಭಸ್ಮವನ್ನು ಸಂಗ್ರಹಿಸಲು ಮತ್ತು ನಿಮಜ್ಜನ ಮಾಡಲು ಹಿರಿಯ ಕಾಂಗ್ರೆಸ್ ನಾಯಕರು ಕುಟುಂಬದೊಂದಿಗೆ ಭಾಗಿಯಾಗಿಲ್ಲ ಎಂಬುವದು ಸರಿ ಅಲ್ಲ, ಕುಟುಂಬದ ಗೌಪ್ಯತೆಗೆ ನಾವು ಗೌರವ ನೀಡುತ್ತೇವೆ ಎಂದು ಎಐಸಿಸಿಯ ಮಾಧ್ಯಮ ಮತ್ತು ಪ್ರಚಾರದ ಅಧ್ಯಕ್ಷ ಪವನ್ ಖೇರಾ ಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ ಪಿ .ವಿ