ಉಡುಪಿ : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಉಡುಪಿ, 30 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾರು ಮತ್ತು ದ್ವಿಚಕ್ರವಾಹನದಲ್ಲಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ (23), ಉಡುಪಿ ಪೆರ್ಡೂರಿನ ಶೈಲೇಶ್ ಶೆಟ್ಟಿ (
Udupi


ಉಡುಪಿ, 30 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕಾರು ಮತ್ತು ದ್ವಿಚಕ್ರವಾಹನದಲ್ಲಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರು ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ (23), ಉಡುಪಿ ಪೆರ್ಡೂರಿನ ಶೈಲೇಶ್ ಶೆಟ್ಟಿ (24), ಕಾಪು ಬೊಮ್ಮರಬೆಟ್ಟು ನಿವಾಸಿ ಪ್ರಜ್ವಲ್ (28), ಮತ್ತು ಉಡುಪಿಯ ಬೊಮ್ಮರಬೆಟ್ಟುವಿನ ರತನ್ (27) ಎಂದು ತಿಳಿದು ಬಂದಿದೆ. ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ ಸಾರ್ವಜನಿಕ ರಸ್ತೆಯಲ್ಲಿ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ 87,500 ಮೌಲ್ಯದ 1.112 ಕೆಜಿ ಗಾಂಜಾ, 2,00,000 ಮೌಲ್ಯದ 37.27 ಗ್ರಾಂ ಎಂಡಿಎಂಎ, 4 ಲಕ್ಷ ರೂ. ಮೌಲ್ಯದ ಕಾರು, 50,000 ರೂ. ಮೌಲ್ಯದ ದ್ವಿಚಕ್ರ ವಾಹನ, 7,130 ರೂ. ನಗದು, ಮತ್ತು 41,000 ರೂ. ಮೌಲ್ಯದ 5 ಮೊಬೈಲ್ ಫೋನ್‌ಗಳು ಸೇರಿ ಒಟ್ಟು 7,86,330ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande