ಸೂರ್ಯ ಘರ್ ಸಬ್ಸಿಡಿಗೆ ೭೫,೦೦೦ ಕೋಟಿ ರೂಪಾಯಿ ಮೀಸಲು : ಜೋಶಿ
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಪ್ರಧಾನ ಮಂತ್ರಿ ಸೂರ್ಯ ಘರ್ ಫಲಾನುಭವಿಗಳಿಗೆ ಸಹಾಯಧನ ನೀಡಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ೭೫,೦೦೦ ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಸಂಸತ್ ಅಧಿವೇಶ
Joshi


ನವದೆಹಲಿ, 04 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಪ್ರಧಾನ ಮಂತ್ರಿ ಸೂರ್ಯ ಘರ್ ಫಲಾನುಭವಿಗಳಿಗೆ ಸಹಾಯಧನ ನೀಡಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ೭೫,೦೦೦ ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವ ಜೋಶಿ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಬಗ್ಗೆ ಸದನಕ್ಕೆ ಸಂಪೂರ್ಣ ಮಾಹಿತಿ ನೀಡಿದರು.

ಸೂರ್ಯ ಘರ್ ಫಲಾನುಭವಿಗಳಿಗೆ ಯೋಜನೆ ಅಳವಡಿಸಿದ 15ರಿಂದ 21 ದಿನದೊಳಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ವರ್ಗಾವಣೆ ಆಗಲಿದೆ. ಇದರಲ್ಲಿ ಯಾರದ್ದೂ ಮಧ್ಯಸ್ಥಿಕೆ ಅವಶ್ಯಕತೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ದೇಶದಲ್ಲಿ 1 ಕೋಟಿ ಕುಟುಂಬಗಳನ್ನು ಸೂರ್ಯ ಘರ್ ಯೋಜನೆಯಡಿ ತರಲು ಗುರಿ ಹೊಂದಲಾಗಿತ್ತು. ಆದರೆ, ಈಗಾಗಲೇ 1.5 ಕೋಟಿ ನೋಂದಣಿ ಆಗಿದೆ. ಜನರಿಂದ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande