ಹೈದರಾಬಾದ್, 04 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ತೆಲಂಗಾಣದ ಗೋದಾವರಿ ನದಿ ಪಾತ್ರದ ಬಳಿ 5.3 ತೀವ್ರತೆಯಲ್ಲಿ ಭೂಕಂಪನವಾಗಿದೆ.
ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಮಣುಗೂರು ಪ್ರದೇಶದಲ್ಲಿ ಮತ್ತೊಮ್ಮೆ ಭೂಕಂಪನ ಸಂಭವಿಸಿದೆ.
ಬುಧವಾರ ಬೆಳಗ್ಗೆ 7:26ರ ಸುಮಾರಿಗೆ ಮಂಡಲದ ಎಲ್ಲಾ ಭಾಗಗಳಲ್ಲಿ 7 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಕಾರಣ ಸುತ್ತಮುತ್ತಲಿನ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು.
ಜನರು ಮನೆಯಿಂದ ಹೊರಬಂದು ರಸ್ತೆಯಲ್ಲೇ ಬಹಳ ಹೊತ್ತು ನಿಂತಿರುವುದು ಕಂಡು ಬಂದಿದೆ. ಇಂದು ಬುಧವಾರ ನಡೆದ ಭೂಕಂಪದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್