ಎರಡನೇ ಟೆಸ್ಟ್ : ಭಾರತ ವಿರುದ್ದ ಆಸ್ಟ್ರೇಲಿಯಾಗೆ ಗೆಲವು
ಅಡಿಲೇಡ್, 8 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಡಿಲೇಡ್‌ನಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿ ಸದ್ಯ 1-1ರಲ್ಲಿ ಸಮಬಲಗೊಂಡಿದೆ. ಮೊದಲ ಟೆಸ್ಟ್‌ನಲ್ಲಿ ಭಾರತ
Cricket


ಅಡಿಲೇಡ್, 8 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಅಡಿಲೇಡ್‌ನಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಆಸ್ಟ್ರೇಲಿಯಾ 10 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿ ಸದ್ಯ 1-1ರಲ್ಲಿ ಸಮಬಲಗೊಂಡಿದೆ. ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ 295 ರನ್‌ಗಳ ಜಯ ಸಾಧಿಸಿತ್ತು.

ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 180 ರನ್ ಗಳಿಸಿತ್ತು. ಇದರ ನಂತರ, ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 337 ರನ್ ಗಳಿಸಿ 157 ರನ್‌ಗಳ ಮುನ್ನಡೆ ಸಾಧಿಸಿತು. ಭಾರತ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 175 ರನ್ ಗಳಿಸಿ 18 ರನ್‌ಗಳ ಮುನ್ನಡೆ ಸಾಧಿಸಿತ್ತು. ಈ ಮೂಲಕ ಆತಿಥೇಯ ತಂಡಕ್ಕೆ 19 ರನ್ ಗಳ ಗುರಿ ನೀಡಲಾಗಿತ್ತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯ ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ಜಯ ಸಾಧಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande