ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ -ಸುಮಲತಾ
ನವದೆಹಲಿ, 18 ಮಾರ್ಚ್ (ಹಿ.ಸ): ಆ್ಯಂಕರ್ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರಿದೆ. ಆದ್ರೆ, ರಾಜ್ಯದ ಕೆಲ
 Sumalatha Ambareesh Talks About Mandya


ನವದೆಹಲಿ, 18 ಮಾರ್ಚ್ (ಹಿ.ಸ):

ಆ್ಯಂಕರ್ :

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರಿದೆ. ಆದ್ರೆ, ರಾಜ್ಯದ ಕೆಲ ಕ್ಷೇತ್ರಗಳ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ನಡುವೆ ಹಗ್ಗಜಗ್ಗಾಟ ನಡೆದಿದೆ.

ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 18) ಬಿಜೆಪಿ ರಾಷ್ಟ್ರೀಯ ನಾಯಕ ಜೆಪಿ ನಡ್ಡಾ ಅವರು ಸುಮಾಲತಾ ಅಂಬರೀಶ್ ಅವರನ್ನು ಕರೆದು ಮಾತುಕತೆ ನಡೆಸಿದರು. ಅಲ್ಲದೇ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದ್ದು, ಬೇರೆ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಜೆಪಿ ನಡ್ಡಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಒಂದು ಸುದೀರ್ಘವಾದ ಚರ್ಚೆ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಜೊತೆ ಮಾತುಕತೆ ಮುಕ್ತಾಯವಾಗಿದೆ. ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್ ಕೊಡಲು ನಾನು ಕೇಳಿದ್ದೇನೆ. ಇಂದು ಸಭೆ ನಡೆಯಲಿದೆ. ಈ ಸಭೆಯ ನಂತರ ನಿರ್ಧಾರವಾಗಲಿದೆ. ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande