ಇಂದು ಬೆಂಗಳೂರು-ಪಂಜಾಬ್ ಪಂದ್ಯ
ಬೆಂಗಳೂರು, 25 ಮಾರ್ಚ್ (ಹಿ.ಸ):ಆ್ಯಂಕರ್: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕಿಕ್ ಹೆಚ್ಚಿಸುತ್ತಿದೆ.
ು


ಬೆಂಗಳೂರು, 25 ಮಾರ್ಚ್ (ಹಿ.ಸ):ಆ್ಯಂಕರ್:

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕಿಕ್ ಹೆಚ್ಚಿಸುತ್ತಿದೆ. ಎರಡು ಡಬಲ್ ಹೆಡರ್ಗಳ ಬಳಿಕ ಇಂದು ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2024 ರ ಆರನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಅವರ ಆರ್ಸಿಬಿ ತಂಡ ಶಿಖರ್ ಧವನ್ ಅವರ ಪಂಜಾಬ್ ಕಿಂಗ್ಸ್ಗೆ ಅನ್ನು ಆತಿಥ್ಯ ವಹಿಸಲಿದೆ.

ಆರ್ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ವಿಕೆಟ್ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್ಗಳಿಂದ ಜಯ ಸಾಧಿಸಿತು. ಸದ್ಯ ಪಾಯಿಂಟ್ಸ್ ಟೇಬಲ್ನಲ್ಲಿ ಬೆಂಗಳೂರು 9ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಮೂರನೇ ಸ್ಥಾನದಲ್ಲಿದೆ.

ಸಿಎಸ್ಕೆ ವಿರುದ್ಧ ಚೆನ್ನೈನಲ್ಲಿ ಆರ್ಸಿಬಿ ನೀಡಿದ ಪ್ರದರ್ಶನ ಬೌಲಿಂಗ್ನಲ್ಲಿ ತೀರಾ ಕಳಪೆಯಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡುವುದು ಖಚಿತ. ಬೆಂಗಳೂರಿನಲ್ಲಿರುವ ಬ್ಯಾಟಿಂಗ್ ಸ್ನೇಹಿ ಪಿಚ್ಗಳ ಸ್ವರೂಪವನ್ನು ಗಮನಿಸಿದರೆ, ಆರ್ಸಿಬಿ ತಂಡಕ್ಕೆ ಬಲಿಷ್ಠ ಅನುಭವಿ ಬೌಲರ್ ಬೇಕೇಬೇಕು.

ಹಿಂದೂಸ್ತಾನ್ ಸಮಾಚಾರ್


 rajesh pande