ದೂರುಗಳನ್ನು ಆಯೋಗಕ್ಕೆ ರವಾನಿಸಲು ಸಿ-ವಿಜಿಲ್ ಆಪ್
ನವದೆಹಲಿ, 27 ಮಾರ್ಚ್ (ಹಿ.ಸ):ಆ್ಯಂಕರ್ : ೧೮ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣ
ನವದೆಹಲಿ, 27 ಮಾರ್ಚ್ (ಹಿ.ಸ):ಆ್ಯಂಕರ್ :


ನವದೆಹಲಿ, 27 ಮಾರ್ಚ್ (ಹಿ.ಸ):ಆ್ಯಂಕರ್ :

೧೮ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.

ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಹಿಂದೂಸ್ತಾನ್ ಸಮಾಚಾರ್


 rajesh pande