ಅರುಣಾಚಲ ಪ್ರದೇಶ : ವಿಧಾನಸಭೆಗೆ ಐವರು ಬಿಜೆಪಿ ಅಭ್ಯರ್ಥಿಗಳ ಅವಿರೋಧ ಆಯ್ಕೆ
ಇಟಾನಗರ, 28 ಮಾರ್ಚ್ (ಹಿ.ಸ): ಆ್ಯಂಕರ್:ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿ
ಇಟಾನಗರ,ಮಾ.28- ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ಡೆಡ್‍ಲೈನ್ ಇಂದು ಮುಕ್ತಾಯವಾಗಿದ್ದು, 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾ ಆಯೋಗ ಇನ್ನೂ ಅಧಿಕೃತವಾಗಿ ಐವರು ವಿಜಯಿ ಆಗಿದ್ದಾರೆ ಎಂದು ಘೋಷಣೆ ಮಾಡಿಲ್ಲ. ಹಲವು ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳು ದುರ್ಬಲಗೊಂಡಿದ್ದು ಈ ಬಾರಿ ಆಡಳಿತ ಸರ್ಕಾರ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆಯಿದೆ.ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್‍ನಲ್ಲಿ ಪೋಸ್ಟ್ ಮಾಡಿ, ರಾಷ್ಟ್ರದ ಚಿತ್ತವನ್ನು ತೋರಿಸುವಲ್ಲಿ ಅರುಣಾಚಲ ಪ್ರದೇಶ ಮುಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ.


ಇಟಾನಗರ, 28 ಮಾರ್ಚ್ (ಹಿ.ಸ):

ಆ್ಯಂಕರ್:ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ಡೆಡ್ಲೈನ್ ಇಂದು ಮುಕ್ತಾಯವಾಗಿದ್ದು, 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಆಯೋಗ ಇನ್ನೂ ಅಧಿಕೃತವಾಗಿ ಐವರು ವಿಜಯಿ ಆಗಿದ್ದಾರೆ ಎಂದು ಘೋಷಣೆ ಮಾಡಿಲ್ಲ. ಹಲವು ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳು ದುರ್ಬಲಗೊಂಡಿದ್ದು ಈ ಬಾರಿ ಆಡಳಿತ ಸರ್ಕಾರ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆಯಿದೆ.

ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್ನಲ್ಲಿ ಪೋಸ್ಟ್ ಮಾಡಿ, ರಾಷ್ಟ್ರದ ಚಿತ್ತವನ್ನು ತೋರಿಸುವಲ್ಲಿ ಅರುಣಾಚಲ ಪ್ರದೇಶ ಮುಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande