ಜೀವ ಬೆದರಿಕೆ ಪತ್ರ ಬಂದಿದೆ: ಪ್ರಿಯಾಂಕ್ ಖರ್ಗೆ
ಕಲಬುರಗಿ, 28 ಮಾರ್ಚ್ (ಹಿ.ಸ): ಆ್ಯಂಕರ್: ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ
ಜೀವ ಬೆದರಿಕೆ ಪತ್ರ ಬಂದಿದೆ: ಪ್ರಿಯಾಂಕ್ ಖರ್ಗೆ


ಕಲಬುರಗಿ, 28 ಮಾರ್ಚ್ (ಹಿ.ಸ):

ಆ್ಯಂಕರ್: ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿರುವುದಾಗಿ ಮತ್ತು ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನೀವೇ (ಬಿಜೆಪಿ) ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಅದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ ಅಲ್ಲದೆ, ಈ ಬೆದರಿಕೆ ಪತ್ರ ಫಿನ್ಲ್ಯಾಂಡ್ ನಿಂದ ಬಂದಿದೆ ಎಂದು ಹೇಳಿ ಸುದ್ದಿಗೋಷ್ಠಿಯಲ್ಲಿ ಜೀವ ಬೆದರಿಕೆ ಪತ್ರ ಓದಿದರು.

ಹಿಂದೂಸ್ತಾನ್ ಸಮಾಚಾರ್


 rajesh pande