ಐಪಿಎಲ್ 17, ಆರ್ ಸಿ ಬಿ -ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ
ಬೆಂಗಳೂರು, 29 ಮಾರ್ಚ್ (ಹಿ.ಸ):ಆ್ಯಂಕರ್: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಮಾರ್ಚ್ 29) ಬೆಂಗಳೂರಿ
ರಪ


ಬೆಂಗಳೂರು, 29 ಮಾರ್ಚ್ (ಹಿ.ಸ):ಆ್ಯಂಕರ್:

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಮಾರ್ಚ್ 29) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ. ಐಪಿಎಲ್ 2024 ರಲ್ಲಿ ಇದು ಆರ್ ಸಿ ಬಿಯ ಮೂರನೇ ಪಂದ್ಯವಾಗಿದ್ದು, ಕೆ ಕೆ ಆರ್ ತನ್ನ ಎರಡನೇ ಪಂದ್ಯವನ್ನು ಆಡಲಿದೆ.

ಆಡಿರುವ ಎರಡು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಕೋಲ್ಕತ್ತಾ ಒಂದು ಪಂದ್ಯದಿಂದ 2 ಅಂಕಗಳನ್ನು ಹೊಂದಿ ನಾಲ್ಕನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಮೇಲೇಳಲು ಆರ್ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

ಮಾರ್ಚ್ 22 ರಂದು ನಡೆದ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಆರ್ ಸಿ ಬಿ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತು. ಬಳಿಕ ಮಾರ್ಚ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಕೊನೆಯ ಓವರ್ನಲ್ಲಿ ಗೆದ್ದು ಜಯದ ಖಾತೆ ತೆರೆದಿದೆ. ಕೆಕೆಆರ್ ಸಹ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಓವರ್ನಲ್ಲಿ ಗೆದ್ದು ಬೀಗಿತ್ತು. ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿರುವ ಕಾರಣ ಬೆಂಗಳೂರಿನಲ್ಲಿ ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.

ಹಿಂದೂಸ್ತಾನ್ ಸಮಾಚಾರ್


 rajesh pande