ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ
ಮುಂಬೈ, 14 ಏಪ್ರಿಲ್ (ಹಿ.ಸ):ಆ್ಯಂಕರ್:ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನ
Firing Outside Actor Salman Khan's Residence In Mumbai


ಮುಂಬೈ, 14 ಏಪ್ರಿಲ್ (ಹಿ.ಸ):ಆ್ಯಂಕರ್:ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದಿದೆ. ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ಸಂಭವಿಸಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಇಬ್ಬರು ಅಪರಿಚಿತರು ಈ ಈ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಶೂಟರ್ಗಳು ಬೈಕ್ ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಗಾಯಗೊಂಡಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸಲ್ಮಾನ್ ಖಾನ್ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಈ ಗುಂಡಿನ ದಾಳಿಯ ನಂತರ ಮುಂಬೈ ಕ್ರೈಂ ಬ್ರಾಂಚ್ ಜೊತೆಗೆ ಬಾಂದ್ರಾ ಪೊಲೀಸ್ ತಂಡವು ಸ್ಥಳಕ್ಕೆ ತಲುಪಿದೆ. ಅಲ್ಲದೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಗ್ಯಾಲಕ್ಸಿ ಅಪಾರ್ಟ್ಮೆಂಟ್ ನ ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande