ಛತ್ತೀಸ್ ಗಢ ಎನ್ ಕೌಂಟರ್, 29 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ
ಕಂಕೇರ್, 17 ಏಪ್ರಿಲ್ (ಹಿ.ಸ):ಆ್ಯಂಕರ್ : ಛತ್ತೀಸ್ ಗಢ ದಲ್ಲಿ 2024ರ ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನಕ್ಕೂ ಮ
Top Maoist leader among 29 ultras


ಕಂಕೇರ್, 17 ಏಪ್ರಿಲ್ (ಹಿ.ಸ):ಆ್ಯಂಕರ್ :

ಛತ್ತೀಸ್ ಗಢ ದಲ್ಲಿ 2024ರ ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನಕ್ಕೂ ಮೊದಲು ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ 29 ನಕ್ಸಲ ರನ್ನು ಹತ್ಯೆ ಮಾಡಿದ್ದಾರೆ.

ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್ ಕೌಂಟರ್ ಇದು ಎಂದೇ ಹೇಳಬಹುದು. ನಕ್ಸಲ್ ಕಮಾಂಡರ್ ಗಳನ್ನು ಕೂಡ ಹತ್ಯೆ ಮಾಡಲಾಗಿದೆ. ಇದು ಛತ್ತೀಸ್ ಗಢದ ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಂಖ್ಯೆಯ ನಕ್ಸಲರನ್ನು ಒಂದೇ ಬಾರಿಗೆ ಹೊಡೆದುರುಳಿಸಲಾಗಿದೆ.

ಮಾವೋವಾದಿಗಳ ಭದ್ರಕೋಟೆಯಾಗಿರುವ ಬಸ್ತಾರ್ ಪ್ರದೇಶದಲ್ಲಿ ಇದುವರೆಗೆ ನಡೆದ ಎನ್ಕೌಂಟರ್ನಲ್ಲಿ ಈ ವರ್ಷ 79 ನಕ್ಸಲರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಛತ್ತೀಸ್ ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಎನ್ಕೌಂಟರ್ ನ್ನು ನಕ್ಸಲೀಯರ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಕರೆದಿದ್ದಾರೆ. ಇದರ ಸಂಪೂರ್ಣ ಶ್ರೇಯ ಭದ್ರತಾ ಪಡೆಗೆ ಸಲ್ಲುತ್ತದೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande