ಮರುಭೂಮಿ ದೇಶ ದುಬೈನಲ್ಲಿ ಧಾರಾಕಾರ ಮಳೆ – ಕೆರೆಯಂತಾದ ವಿಮಾನ ನಿಲ್ದಾಣ
ಅಬುಧಾಬಿ, 17 ಏಪ್ರಿಲ್ (ಹಿ.ಸ): ಆ್ಯಂಕರ್ :ಯುನೈಟೆಡ್ ಅರಬ್ ಎಮಿರೇಟ್ಸ್ ನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮರು
ವವವ


ಅಬುಧಾಬಿ, 17 ಏಪ್ರಿಲ್ (ಹಿ.ಸ): ಆ್ಯಂಕರ್ :ಯುನೈಟೆಡ್ ಅರಬ್ ಎಮಿರೇಟ್ಸ್ ನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಮರುಭೂಮಿ ದೇಶದ ಸುತ್ತಲೂ ವ್ಯಾಪಕವಾದ ಪ್ರವಾಹವನ್ನು ಉಂಟು ಮಾಡಿದೆ.

ದುಬೈನ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೆರೆಯಂತಾಗಿತ್ತು. ನಿಲ್ದಾಣದಲ್ಲೇ ತೊರೆಯಂತೆ ನೀರು ಹರಿಯುತ್ತಿದ್ದರಿಂದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ದುಬೈನಲ್ಲಿನ ಪ್ರವಾಹ ದೃಶ್ಯದ ವೀಡಿಯೋ ಹಾಗೂ ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ವಿಮಾನ ನಿಲ್ದಾಣದಿಂದ ಭಾರತ, ಪಾಕಿಸ್ತಾನ, ಸೌದಿ ಮತ್ತು ಯುನೈಟೆಡ್ ಕಿಂಗ್ಡಮ್ ಸೇರಿದಂತೆ ಹಲವು ದೇಶಗಳಿಗೆ ನಿನ್ನೆ ಏಪ್ರಿಲ್ 16 ರಂದು ವಿಮಾನಗಳ ಕಾರ್ಯಾಚರಣೆ ವಿಳಂಬವಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಹಿಂದೂಸ್ತಾನ್ ಸಮಾಚಾರ್


 rajesh pande