ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಬಾಗಲಕೋಟೆ ಜಿಲ್ಲೆಯ ನಾಲ್ವರು ಸಾವು
ಬಾಗಲಕೋಟೆ, 18 ಏಪ್ರಿಲ್ (ಹಿ.ಸ):ಆ್ಯಂಕರ್ : ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿ
ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಬಾಗಲಕೋಟೆ ಜಿಲ್ಲೆಯ ನಾಲ್ವರು ಸಾವು


ಬಾಗಲಕೋಟೆ, 18 ಏಪ್ರಿಲ್ (ಹಿ.ಸ):ಆ್ಯಂಕರ್ : ಮಹಾರಾಷ್ಟ್ರದ ಜತ್ತ ಬಳಿಯ ನಾಗಾಸಪಾಟಾ ಎಂಬಲ್ಲಿ ಬುಧವಾರ ರಾತ್ರಿ ಸಂಭಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ದಾರುಣವಾಗಿ ಮೃತಪಟ್ಟಿದ್ದಾರೆ. ಬಾಗಲಕೋಟೆಯ ನಾಲ್ವರು ಯುವತಿಯರು ಮಹಾರಾಷ್ಟ್ರದ ಶಿವಾನಿ ಅಂಬೇಕರ್ ಎಂಬುವರ ಮದುವೆಗೆ ಹೊರಟಿದ್ದರು. ಖಾಸಗಿ ವೊಲ್ವೊ ಬಸ್ಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ವಧುವಿನ ತಂಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಡಿಹುಡಿ, ರೆಹಮತ್ ಪುರ, ಮುಧೋಳ ತಾಲ್ಲೂಕಿನ ಲೋಕಾಪುರ, ವಿಜಯಪುರ ಜಿಲ್ಲೆಯ ಕನಮಡಿ ಮೂಲದವರು ಎಂದು ಗುರುತಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande