ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ, ಸಾವಿರಾರು ಮಂದಿ ಸ್ಥಳಾಂತರ
ಉತ್ತರ ಸುಲಾವೆಸಿ, 18 ಏಪ್ರಿಲ್ (ಹಿ.ಸ):ಆ್ಯಂಕರ್: ಇಂಡೋನೇಷ್ಯಾ ದ ರುವಾಂಗ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿ
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ, ಸಾವಿರಾರು ಮಂದಿ ಸ್ಥಳಾಂತರ


ಉತ್ತರ ಸುಲಾವೆಸಿ, 18 ಏಪ್ರಿಲ್ (ಹಿ.ಸ):ಆ್ಯಂಕರ್: ಇಂಡೋನೇಷ್ಯಾ ದ ರುವಾಂಗ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ. ಹೊಗೆ, ಶಾಖದ ಪರಿಣಾಮವು ಬಹು ದೂರದವರೆಗೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಾವಿರಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಐದು ಕಡೆ ಜ್ವಾಲಾಮುಖಿ ಸ್ಫೋಟ ಸಂಭವಿಸಿದೆ, ಇಂಡೋನೇಷ್ಯಾದ ಉತ್ತರ ಸುಲಾವೆಸಿಯಲ್ಲಿ ಪರ್ವತದಲ್ಲಿ ಈ ಸ್ಪೋಟ ಸಂಭವಿಸಿದ್ದು, ಲಾವಾ ಹಾಗೂ ಬಿಸಿ ಬೂಧಿ ಆಕಾಶದೆತ್ತರಕ್ಕೆ ವ್ಯಾಪಿಸಿದೆ.

ರಾಯಧಾನಿ ಮನಾಡೋದ ಸುಮಾರು 100 ಕಿ.ಮೀ ದೂರದ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಿಸಿದೆ. ಈ ಜ್ವಾಲಾಮುಖಿ ಒಂದೇ ದಿನದಲ್ಲಿ ಐದು ಬಾರಿ ಜೋರಾಗಿ ಚಿಮ್ಮಿದೆ. ಪರ್ವತಕ್ಕೆ ಸಮುದ್ರ ಹೊಂದಿಕೊಂಡಿರುವ ಕಾರಣ ಸುನಾಮಿ ಸಂಭವಿಸುವ ಸಾಧ್ಯತೆ ಇದೆ ಎಂದು ಆಡಳಿತ ಎಚ್ಚರಿಕೆ ನೀಡಿದೆ.

ಸಮುದ್ರದ ಉತ್ತರ ಬದಿಯಲ್ಲಿ ತಗುಲಂಡಂಗ್ ದ್ವೀಪದಲ್ಲಿರುವ 11,000 ಜನರನ್ನು ಸ್ಥಳಾಂತರ ಮಾಡುವಂತೆ ಜನರಿಗೆ ಪರ್ವತದಿಂದ 6 ಕಿ.ಮೀ.ದೂರದಲ್ಲಿರುವಂತೆ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande