ಚುನಾವಣಾ ಕಣದಿದ ಹಿಂದೆಸರಿದ ಗುಲಾಂ ನಬಿ ಆಜಾದ್, ನಾಮಪತ್ರ ವಾಪಸ್
ಶ್ರೀನಗರ್, 18 ಏಪ್ರಿಲ್ (ಹಿ.ಸ):ಆ್ಯಂಕರ್ : ಡೆಮಾಕ್ರಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ
ಚುನಾವಣಾ ಕಣದಿದ ಹಿಂದೆಸರಿದ ಗುಲಾಂ ನಬಿ ಆಜಾದ್, ನಾಮಪತ್ರ ವಾಪಸ್


ಶ್ರೀನಗರ್, 18 ಏಪ್ರಿಲ್ (ಹಿ.ಸ):ಆ್ಯಂಕರ್ :

ಡೆಮಾಕ್ರಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಿಂದ ಗುಲಾಂ ನಬಿ ಆಜಾದ್ ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪಕ್ಷ ತಿಳಿಸಿದೆ.

ಆಜಾದ್ ಅವರು ಹಿಂದೆ ಸರಿದ ಬಳಿಕ ಇದೀಗ ಮೊಹಮ್ಮದ್ ಸಲೀಂ ಪರ್ರೆ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಬಹುದು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಕಾಶ್ಮೀರದ ಡಿಪಿಎಪಿಯ ಪ್ರಾಂತೀಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬೆಳವಣಿಗೆಯನ್ನು ಆಜಾದ್ ಖಚಿತಪಡಿಸಿದ್ದಾರೆ. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಅನಂತನಾಗ್-ರಜೌರಿ ಕ್ಷೇತ್ರಕ್ಕೆ ವಕೀಲ ಸಲೀಂ ಪರ್ರೆ ಡಿಪಿಎಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್


 rajesh pande