ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ-ಡಾ.ಜಿ ಪರಮೇಶ್ವರ
ತುಮಕೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ನಗರದ ಬಿವಿಬಿ ಇಂಜಿನಿಯರ್ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹ
 BVB Engineering College Student Neha Murder C


ತುಮಕೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ನಗರದ ಬಿವಿಬಿ ಇಂಜಿನಿಯರ್ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್ ಕೊಲೆ ಮಾಡಿದ್ದಾನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದರು.

ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೂಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಜೈ ಶ್ರೀರಾಮ್ ಎಂದು ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿದ್ದು ದುರದೃಷ್ಟಕರ. ಕಾನೂನಿನ ವಿರುದ್ಧವಾಗಿ ನಡೆದುಕೊಂಡರೆ ಯಾರನ್ನೂ ರಕ್ಷಣೆ ಮಾಡಲ್ಲ. ರಾಜ್ಯದ ಜನತೆಗೆ ಗೃಹ ಸಚಿವನಾಗಿ ಭರವಸೆ ಕೊಡಲು ಬಯಸುತ್ತೇನೆ. ರಾಮನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹಜ. ಅದಕ್ಕೆ ಇನ್ನೊಬ್ಬರು ಬೇರೆ ಘೋಷಣೆ ಕೂಗಿದ್ದಾರೆ. ಯಾರನ್ನೂ ರಕ್ಷಣೆ ಮಾಡುವುದಾಗಲಿ, ಓಲೈಸುವುದಾಗಲಿ ಮಾಡಲ್ಲ. ಯಾವುದೇ ಮುಲಾಜಿಲ್ಲದೆ ಕಾನೂನಡಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande