ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ
ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರ
Bengaluru News In Kannada: IT Raid Acoress Bengaluru, 


ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿದೆ. ನಗರದ ಹತ್ತಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಕ್ಷದ ಜತೆ ಗರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ನೆಲಮಂಗಲದಲ್ಲಿ ಕೆಲವು ದಿನಗಳ ಹಿಂದೆ ದಾಳಿ ಮಾಡಿದ್ದರು. 6 ಕಾರುಗಳಲ್ಲಿ ಬಂದ 20 ಐಟಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿತ್ತು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಕೂಡ ಕೆಲವು ದಿನಗಳ ಹಿಂದೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಡಿಕೆ ಸುರೇಶ್ ಅವರ ಮತ್ತೊಬ್ಬ ಆಪ್ತನ ಮನೆ ಮೇಲೆ ಬೆಂಗಳೂರಿನ ವಾಜರಹಳ್ಳಿಯಲ್ಲಿ ಐಟಿ ದಾಳಿ ನಡೆದಿತ್ತು.

ಹಿಂದೂಸ್ತಾನ್ ಸಮಾಚಾರ್


 rajesh pande