ಎಚ್ ಡಿ ಕುಮಾರಸ್ವಾಮಿ ಹೇಳಿಕೆ,ಮಹಿಳಾ ಆಯೋಗದ ನೋಟಿಸ್ ಗೆ ಉಚ್ಚ ನ್ಯಾಯಾಲಯ ತಡೆ
ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರ
ಎಚ್ ಡಿ ಕುಮಾರಸ್ವಾಮಿ  ಹೇಳಿಕೆ,ಮಹಿಳಾ ಆಯೋಗದ ನೋಟಿಸ್ ಗೆ ಉಚ್ಚ ನ್ಯಾಯಾಲಯ ತಡೆ


ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ಸಂಬಂಧ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದು, ಇದೀಗ ಈ ನೋಟಿಸ್ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ. ಇದರಿಂದ ಲೋಕಸಭಾ ಚುನಾವಣೆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಗೆ ದೊಡ್ಡ ಸಮಾಧಾನ ಸಿಕ್ಕಂತಾಗಿದೆ.

ದೂರುಗಳು ಇಲ್ಲದಿದ್ದರೂ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ,ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪರ ವಕೀಲ ಎ.ವಿ.ನಿಶಾಂತ್ ವಾದ ಮಂಡಿಸಿದರು. ಈ ವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಆಯೋಗದ ನೋಟಿಸ್ ಗೆ ತಡೆ ನೀಡಿ ಆದೇಶ ಹೊರಡಿಸಿದೆ. ಕಾರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ ನೀಡಿಲ್ಲ, ಸಮನ್ಸ್ ನೀಡಿಲ್ಲ. ಸ್ಪಷ್ಟೀಕರಣ ನೀಡಿ ಇಲ್ಲವಾದರೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande