ಕಾಂಗ್ರೆಸ್ ಪರ ಪ್ರಚಾರ ಮಾಡದಿರಲು ನವಜೋತ್ ಸಿಂಗ್ ಸಿದ್ಧು ನಿರ್ಧಾರ
ಚಂಡೀಗಢ, 19 ಏಪ್ರಿಲ್ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿದ್ಧು ಹಾಗೂ ಅವರ ಗುಂಪಿನ ಯಾವುದೇ ಕಾರ
ಲೋಕಸಭೆ ಚುನಾವಣೆಗೆ ಪಕ್ಷವು ತನ್ನ ಅಭ್ಯರ್ಥಿಗಳನ್ನು ನಿರ್ಧರಿಸುವಾಗ ನವಜೋತ್ ಸಿಂಗ್ ಸಿದ್ಧು ಅವರೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಈಗ ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಸಿದ್ಧು ಅವರನ್ನು ಸಂಪರ್ಕಿಸಿ ಪ್ರಚಾರಕ್ಕಾಗಿ ರ್ಯಾಲಿಗಳನ್ನು ನಡೆಸುವಂತೆ ಮನವಿ ಮಾಡುತ್ತಿದ್ದಾರೆ ಎಂದಿದ್ದಾರೆ.


ಚಂಡೀಗಢ, 19 ಏಪ್ರಿಲ್ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿದ್ಧು ಹಾಗೂ ಅವರ ಗುಂಪಿನ ಯಾವುದೇ ಕಾರ್ಯಕರ್ತರು ಕಾಂಗ್ರೆಸ್ ಪರ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ. ನವಜೋತ್ ಸಿಂಗ್ ಸಿಧು ಅವರಲ್ಲದೆ, ಪಂಜಾಬ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ಶಂಶೇರ್ ಸಿಂಗ್ ಡುಲ್ಲೋ, ಮಾಜಿ ಶಾಸಕ ನಾಜರ್ಸಿಂಗ್ ಮನ್ಶಾಹಿಯಾ, ಜಗದೇವ್ ಸಿಂಗ್ ಕಮಲು, ಮಹೇಶ್ ಇಂದರ್ ಸಿಂಗ್ ಮತ್ತು ಬಟಿಂಡಾ ಗ್ರಾಮಾಂತರ ಕಾಂಗ್ರೆಸ್ ಉಸ್ತುವಾರಿ ಹರ್ಬಿಂದರ್ ಲಾಡಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಈ ತೀರ್ಮಾನ ಕೈಗೊಂಡಿದ್ದಾರೆ.

ಪಕ್ಷಕ್ಕೆ ಅಗತ್ಯವಿರುವಾಗ ನವಜೋತ್ ಸಿಂಗ್ ಸಿಧು ಅವರನ್ನು ನೆನಪಿಸಿಕೊಳ್ಳುತ್ತಾರೆ. ಆದರೆ ಚುನಾವಣೆಯ ನಂತರ ಅವರನ್ನು ಕಡೆಗಣಿಸಲಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಲೋಕಸಭೆ ಚುನಾವಣೆಗೆ ಪಕ್ಷವು ತನ್ನ ಅಭ್ಯರ್ಥಿಗಳನ್ನು ನಿರ್ಧರಿಸುವಾಗ ನವಜೋತ್ ಸಿಂಗ್ ಸಿದ್ಧು ಅವರೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಈಗ ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಸಿದ್ಧು ಅವರನ್ನು ಸಂಪರ್ಕಿಸಿ ಪ್ರಚಾರಕ್ಕಾಗಿ ರ್ಯಾಲಿಗಳನ್ನು ನಡೆಸುವಂತೆ ಮನವಿ ಮಾಡುತ್ತಿದ್ದಾರೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande