ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯ, ಪ್ರತಿ ಧ್ವನಿಯೂ ಮುಖ್ಯ: ನರೇಂದ್ರ ಮೋದಿ
ನವದೆಹಲಿ, 19 ಏಪ್ರಿಲ್ (ಹಿ.ಸ):ಆ್ಯಂಕರ್: ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನ
ನವದೆಹಲಿ, 19 ಏಪ್ರಿಲ್   (ಹಿ.ಸ):ಆ್ಯಂಕರ್:


ನವದೆಹಲಿ, 19 ಏಪ್ರಿಲ್ (ಹಿ.ಸ):ಆ್ಯಂಕರ್:

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಸಂದೇಶವನ್ನು ರವಾನೆ ಮಾಡಿದ್ದಾರೆ. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಇಂದಿನಿಂದ ಆರಂಭ, ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಎಲ್ಲಾ ಸ್ಥಾನಗಳ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಮತದಾನದಲ್ಲಿ ಹೊಸ ದಾಖಲೆಯನ್ನು ರಚಿಸಬೇಕೆಂದು ನಾನು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.

ಪ್ರಥಮ ಬಾರಿಗೆ ಮತದಾನ ಮಾಡಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ.

ದೇಶದ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ಇದಲ್ಲದೇ ಅರುಣಾಚಲ ಪ್ರದೇಶ, ಸಿಕ್ಕಿಂ ಮುಂತಾದ ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆಯುತ್ತಿದೆ.

ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ ಮತ್ತು ಉತ್ತರ ಪ್ರದೇಶದಲ್ಲಿ ಮತದಾನ ನಡೆಯುತ್ತಿದೆ. ಇದಲ್ಲದೇ ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ನಿಕೋಬಾರ್, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಪುದುಚೇರಿಯಲ್ಲಿಯೂ ಮತದಾನ ನಡೆಯುತ್ತಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande