ನೇಹಾ ಹತ್ಯೆ ಪ್ರಕರಣವನ್ನು ಎಸ್ ಐ ಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ
ಹುಬ್ಬಳ್ಳಿ, 19 ಏಪ್ರಿಲ್ (ಹಿ.ಸ):ಆ್ಯಂಕರ್: ಹಾಡಹಗಲೇ ಕಾಲೇಜು ಕ್ಯಾಂಪಸ್ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘ
ನೇಹಾ ಹತ್ಯೆ ಪ್ರಕರಣವನ್ನು ಎಸ್ ಐ ಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ


ಹುಬ್ಬಳ್ಳಿ, 19 ಏಪ್ರಿಲ್ (ಹಿ.ಸ):ಆ್ಯಂಕರ್: ಹಾಡಹಗಲೇ ಕಾಲೇಜು ಕ್ಯಾಂಪಸ್ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದ ಕಗ್ಗೊಲೆಯಾಗಿದೆ ಎಂದು ದೂರಿದರು.

ಹಿಂದೂಸ್ತಾನ್ ಸಮಾಚಾರ್


 rajesh pande