ಏ.24ರಂದು ಕ್ಷೇತ್ರ ಬಿಟ್ಟು ತೆರಳುವಂತೆ ರಾಜಕೀಯ ನಾಯಕರಿಗೆ ಆಯೋಗ ಸೂಚನೆ
ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳ ಪ್ರಚಾರಕ್ಕ
ಏ.24ರಂದು ಕ್ಷೇತ್ರ ಬಿಟ್ಟು ತೆರಳುವಂತೆ ರಾಜಕೀಯ ನಾಯಕರಿಗೆ ಆಯೋಗ ಸೂಚನೆ


ಬೆಂಗಳೂರು, 19 ಏಪ್ರಿಲ್ (ಹಿ.ಸ):ಆ್ಯಂಕರ್: ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳ ಪ್ರಚಾರಕ್ಕೆ ಆಗಮಿಸಿರುವ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಏ.24ರ ಸಂಜೆ 6 ಗಂಟೆಯ ನಂತರ ಕ್ಷೇತ್ರ ಬಿಟ್ಟು ತೆರಳಲು ಭಾರತದ ಚುನಾವಣಾ ಆಯೋಗ ಸೂಚನೆ ನೀಡಿದೆ.

ಆಯಾ ಕ್ಷೇತ್ರದ ಮತದಾರರನ್ನು ರಾಜಕೀಯ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಬಹಿರಂಗ ಪ್ರಚಾರದ ಸಮಯ ಮುಗಿದ ಕೂಡಲೇ ತೆರಳಬೇಕು. ಕ್ಷೇತ್ರ ಬಿಟ್ಟು ತೆರಳಿರುವ ಬಗ್ಗೆ ಆಯಾ ಚುನಾವಣಾ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ.ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಹೊರಗಿನವರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದು ಸಾಮಾನ್ಯ. ಮತದಾನದ ಅವ ಮುಕ್ತಾಯವಾಗುವ 48 ಗಂಟೆಗಳ ಮುಂಚಿತ ಅವಯಲ್ಲಿ ಕ್ಷೇತ್ರದ ಮತದಾರರಲ್ಲದವರು ಆಯಾ ಕ್ಷೇತ್ರದಲ್ಲಿ ಉಪಸ್ಥಿತರಿರಬಾರದು.

ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯುವ ಉದ್ದೇಶದಿಂದ ಈ ರೀತಿಯ ಕ್ರಮ ಕೈಗೊಂಡಿದೆ. ಆಯೋಗವು ಜಿಲ್ಲಾ ಚುನಾವಣಾ ಅಧಿಕಾರಿ, ಪೊಲೀಸ್ ಅಧಿಕಾರಿಗೆ ನಿರ್ದೇಶನ ನೀಡಿದ್ದು, ಕಲ್ಯಾಣ ಮಂಟಪ, ಸಮುದಾಯ ಭವನಗಳನ್ನು ಪರಿಶೀಲಿಸಿ ಕ್ಷೇತ್ರದ ಮತದಾರರಲ್ಲದವರು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande