ಬಳ್ಳಾರಿ: ಮಹಾನಗರ ಪಾಲಿಕೆಯಲ್ಲಿ ಕಂಟ್ರೋಲ್ ರೂಂ ಆರಂಭ
ಬಳ್ಳಾರಿ, 20 ಏಪ್ರಿಲ್ (ಹಿ.ಸ): ಆ್ಯಂಕರ್: 09-ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರದ 94-ಬಳ್ಳಾರಿ ನಗರ ವಿಧಾನಸಭಾ ಕ್ಷ
ಬಳ್ಳಾರಿ: ಮಹಾನಗರ ಪಾಲಿಕೆಯಲ್ಲಿ ಕಂಟ್ರೋಲ್ ರೂಂ ಆರಂಭ


ಬಳ್ಳಾರಿ, 20 ಏಪ್ರಿಲ್ (ಹಿ.ಸ):

ಆ್ಯಂಕರ್: 09-ಬಳ್ಳಾರಿ (ಪ.ಪಂ) ಲೋಕಸಭಾ ಕ್ಷೇತ್ರದ 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಸಂಬಂಧ ಸಾರ್ವಜನಿಕರ ಅನುಕೂಲಕ್ಕಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದೆ ಎಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ಸಾಬ್ಅವರು ತಿಳಿಸಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ದೂರವಾಣಿ ಸಂಪರ್ಕ ಸಂಖ್ಯೆ 08932-272356, ಮತದಾರರ ಸಹಾಯವಾಣಿ-1950, ಸಿ-ವಿಜಿಲ್ ಹಾಗೂ ಎನ್.ಜಿ.ಎಸ್.ಪಿ ಪೋರ್ಟ್ಲ್ ಮೂಲಕ ದೂರು ಸಲ್ಲಿಸಬಹುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.


 rajesh pande