ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ
ಬೆಂಗಳೂರು, 20 ಏಪ್ರಿಲ್ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್
ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ


ಬೆಂಗಳೂರು, 20 ಏಪ್ರಿಲ್ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಹೇಗಾದರೂ ಶತಾಯ ಗತಾಯ ಗೆಲುವು ಸಾಧಿಸಲು ಹರಸಾಹಸ ಪಡುತ್ತಿವೆ. ಅದರಂತೆ ಇಂದು (ಏ.20) ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಿಗಿ ಪೊಲೀಸ್ ಬಂದೂಬಸ್ತ್ ಮಾಡಲಾಗಿದೆ.

ಭದ್ರತೆಗಾಗಿ ಎರಡು ಸಾವಿರ ಪೊಲೀಸರ ನಿಯೋಜನೆ

ಇನ್ನು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದ್ದು, ಬಂದೋಬಸ್ತ್ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್, ಪೊಲೀಸ್ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande