50 ಮಂದಿ ಸಂಚರಿಸುತ್ತಿದ್ದ ದೋಣಿ ಪಲ್ಟಿ; ಇಬ್ಬರು ಸಾವು, 7 ಮಂದಿ ನಾಪತ್ತೆ
ಬರ್ಗರ್, 20 ಏಪ್ರಿಲ್ (ಹಿ.ಸ):ಆ್ಯಂಕರ್:50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ
rying-50-people-overturned-2-dead-7-miss


ಬರ್ಗರ್, 20 ಏಪ್ರಿಲ್ (ಹಿ.ಸ):ಆ್ಯಂಕರ್:50 ಮಂದಿ ಸಂಚರಿಸುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಒಡಿಶಾದ ಝಾರ್ಸುಗುಡಾ ಜಿಲ್ಲೆಯ ಮಹಾನದಿಯಲ್ಲಿ ಸಂಭವಿಸಿದೆ. ಪಥರ್ಸೇನಿ ಕುಡಾದಿಂದ ಬರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಸ್ಥಳೀಯ ಮೀನುಗಾರರು 35 ಮಂದಿಯನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಏಳು ಪ್ರಯಾಣಿಕರನ್ನು ಕಾಪಾಡಿದ್ದಾರೆ.

ನಾಪತ್ತೆಯಾಗಿರುವ ಏಳು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಐವರು ಮುಳುಗುತಜ್ಞರಿಂದ ಏಳು ಮಂದಿಗಾಗಿ ಹುಡುಕಾಟ ನಡೆಯುತ್ತಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande